ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯಲಿರುವ 96 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆಬಿತ್ತು.
ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯಲಿರುವ 96 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆಬಿತ್ತು.
ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಆಂಧ್ರಪ್ರದೇಶ (25) ಮತ್ತು ತೆಲಂಗಾಣದ (17) ಎಲ್ಲ ಕ್ಷೇತ್ರಗಳು ಮಾತ್ರವಲ್ಲದೆ, ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ ಎಂಟು, ಬಿಹಾರದ ಐದು, ಜಮ್ಮು ಮತ್ತು ಕಾಶ್ಮೀರದ ಒಂದು ಹಾಗೂ ಒಡಿಶಾ, ಜಾರ್ಖಂಡ್‌ನ ತಲಾ ನಾಲ್ಕು ಕ್ಷೇತ್ರಗಳಿಗೆ ಮತದಾನ ನಡೆಯಲಿವೆ.
ನಾಲ್ಕನೇ ಹಂತದ ಮುಕ್ತಾಯದೊಂದಿಗೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಗೆ ತೆರೆ ಬೀಳಲಿದೆ. ಒಟ್ಟು 381 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ. ಆಂಧ್ರಪ್ರದೇಶದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಜತೆಯಲ್ಲೇ ವಿಧಾನಸಭಾ ಚುನಾವಣೆಯ ಮತದಾನವೂ ನಡೆಯಲಿದೆ.
ಬಹಿರಂಗ ಪ್ರಚಾರದ ಕೊನೆಯ ದಿನವಾದ ಶನಿವಾರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿವಿಧೆಡೆ ರ‍್ಯಾಲಿಗಳಲ್ಲಿ ಪಾಲ್ಗೊಂಡರು.