ಪಾಲಿಗಂಜ್ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಪಾಲಿಗಂಜ್ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಪಾಲಿಗಂಜ್ ಪ್ರದೇಶದಲ್ಲಿ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು. ಅವರು ವೇದಿಕೆ ಮೇಲೆ ಬರುತ್ತಿದ್ದಂತೆಯೇ ವೇದಿಕೆಯ ಒಂದು ಭಾಗ ಏಕಾಏಕಿ ಕುಸಿದಿದೆ. ಕೂಡಲೇ ಎಚ್ಚೆತ್ತ ಭಾರತಿ ಅವರು ರಾಹುಲ್ ಕೈಯನ್ನು ಹಿಡಿದುಕೊಂಡು ಪಕ್ಕಕ್ಕೆ ಕರೆದುಕೊಂಡು ಹೋಗಿದ್ದಾರೆ. ಜತೆಗೆ ಭದ್ರತಾ ಸಿಬ್ಬಂದಿಯು ರಾಹುಲ್ ನೆರವಿಗೆ ಧಾವಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.