ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು, ಉಗ್ರರ ಅಡಗುತಾಣವೊಂದನ್ನು ಭೇದಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು, ಉಗ್ರರ ಅಡಗುತಾಣವೊಂದನ್ನು ಭೇದಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
'ಸೇನೆಯ 13-ಆರ್‌ಆರ್, ಬಂಡಿಪೊರಾ ಪೊಲೀಸರು ಹಾಗೂ ಸಿಆರ್‌ಪಿಎಫ್‌ನ 3ನೇ ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಜಿಲ್ಲೆಯ ಚಂಗಲಿ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ ಅಡಗುತಾಣವನ್ನು ಭೇದಿಸಲಾಗಿದೆ' ಎಂದು ಬಂಡಿಪೊರಾ ಪೊಲೀಸರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.