ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಭಾಗಕ್ಕೆ ಶವವನ್ನು ಕೊಂಡೊಯ್ಯುತಿದ್ದ ಅಂಬ್ಯುಲೆನ್ಸ್ ಕಾರೊಂದಕ್ಕೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿದ್ದ ನಿವೃತ್ತ ಪೋಲೀಸ್ ಅಧಿಕಾರಿ ಕೃಷ್ಣ ಎಂಬವರು ಗಾಯಗೊಂಡಿದ್ದಾರೆ.
ದೇರಳ ಕಟ್ಟೆ ನಿವಾಸಿ ಪ್ರಶಾಂತ್ ಎಂಬಾತ ಚಲಾಯಿಸಿದ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಆಂಬ್ಯುಲೆನ್ಸ್ ಚಾಲಕ ಮಧ್ಯ ಸೇವಿಸಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದರು. ಬಳಿಕ ಶವವನ್ನು ಬೇರೊಂದು ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಯಿತು.