ಭುವನೇಶ್ವರ್: ಒಡಿಶಾ ಸಿಎಂ ನವೀನ್ ಪಟ್ನಾಯಕ್ ತಮ್ಮ ಆರೊಗ್ಯದ ಬಗ್ಗೆ ಕೇಳಿಬರುತ್ತಿರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ.
ತಮ್ಮ ಆರೋಗ್ಯ ಉತ್ತಮವಾಗಿದೆ ಎಂದು ಹೇಳಿರುವ ಪಟ್ನಾಯಕ್ ತಾವು ಸಕ್ರಿಯವಾಗಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಪ್ರಧಾನಿ ಮೋದಿ ಒಡಿಶಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ನವೀನ್ ಪಟ್ನಾಯಕ್ ಅವರಿಗೆ ಅನಾರೋಗ್ಯ ಇದ್ದು ಇದರ ಹಿಂದೆ ಪಿತೂರಿ ನಡೆಯುತ್ತಿದೆ ಬಿಜೆಪಿ ಸರ್ಕಾರ ಒಡಿಶಾದಲ್ಲಿ ಅಸ್ತಿತ್ವಕ್ಕೆ ಬಂದಲ್ಲಿ ಈ ಪಿತೂರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವುದಾಗಿ ಹೇಳಿದ್ದರು.