ಕೋವಿಡ್ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ್ದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಿಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದಂತೆ ಅಡ್ಡಪರಿಣಾಮ ಬೀರುವ ಸಾಮರ್ಥ್ಯ ಕೋವಿಶೀಲ್ಡ್‌ಗೆ ಇದೆ ಎಂದು ಲಸಿಕೆ ತಯಾರಿಸಿರುವ ಆಸ್ಟ್ರಾಜೆನೆಕಾ ಸಂಸ್ಥೆಯು ಲಂಡನ್‌ನ ನ್ಯಾಯಾಲಯದೆದುರು ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶಾಲ್ ತಿವಾರಿ ಎಂಬುವವರು ಅರ್ಜಿ ದಾಖಲಿಸಿದ್ದಾರೆ.
ಕಂಪೆನಿಯು ತಯಾರಿಸಿದ ಕೋವಿಡ್ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಸಂಖ್ಯೆ ಇಳಿಕೆ ಸಮಸ್ಯೆ ಎದುರಾಗಲಿದೆ ಎಂಬುದನ್ನು ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂಬುದಾಗಿ ಅರ್ಜಿಯು ವಿವರಿಸಿದೆ.
ಕೋವಿಶೀಲ್ಡ್‌ನ ಅಡ್ಡಪರಿಣಾಮಗಳು ಮತ್ತು ಅದರ ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ(IMA) ವೈದ್ಯಕೀಯ ತಜ್ಞರನ್ನೊಳಗೊಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯ ವೈದ್ಯಕೀಯ ತಜ್ಞರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.