ಮುಳ್ಳೇರಿಯ: ಇತಿಹಾಸ ಪ್ರಸಿದ್ಧ ಕ್ಷೇತ್ರ ಬೆಳ್ಳೂರು ಶ್ರೀ ಮಹಾವಿಷ್ಣು ದೇವಾಲಯದ 8ನೇ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಆಯ್ಕೆಯಾದ ಎ ಆರ್ ಸುಬ್ಬಯ್ಯ ಕಟ್ಟೆ ಹಾಗೂ ಪದ್ಮಶ್ರೀ ಪುರಸ್ಕøತ ಸತ್ಯನಾರಾಯಣ ಬೆಳೇರಿ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಲ್ಲಗ ಚಂದ್ರಶೇಖರ ರಾವ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಗಂಗಾಧರ ಬಲ್ಲಾಳ್, ಪುಂಡರೀಕಾಕ್ಷ ಕಡಂಬಳಿತ್ತಾಯ, ಹರಿಕೃಷ್ಣ ಕಡಂಬಳಿತ್ತಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿಯ ಜಿಲ್ಲಾಧ್ಯಕ್ಷ , ಪತ್ರಕರ್ತ ಅಖಿಲೇಶ್ ನಗುಮುಗಂ ಮೊದಲಾದವರು ಉಪಸ್ಥಿತರಿದ್ದರು. ಡಾ. ಮೋಹನದಾಸ ರೈ ಸ್ವಾಗತಿಸಿ, ಕರುಣಾಕರ ವಂದಿಸಿದರು. ಚಂದ್ರಶೇಖರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.