ಬ್ಯಾಂಕಾಕ್: ಲಂಡನ್‌ನಿಂದ ಸಿಂಗಪುರಕ್ಕೆ ಹೊರಟಿದ್ದ ಸಿಂಗಪುರ ಏರ್‌ಲೈನ್ಸ್‌ನ ವಿಮಾನವೊಂದು ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
ಬ್ಯಾಂಕಾಕ್ | ಪ್ರತಿಕೂಲ ಹವಾಮಾನದಿಂದ ವಿಮಾನ ತುರ್ತು ಭೂಸ್ಪರ್ಶ; ಪ್ರಯಾಣಿಕ ಸಾವು
0
ಮೇ 21, 2024
Tags
ಬ್ಯಾಂಕಾಕ್: ಲಂಡನ್‌ನಿಂದ ಸಿಂಗಪುರಕ್ಕೆ ಹೊರಟಿದ್ದ ಸಿಂಗಪುರ ಏರ್‌ಲೈನ್ಸ್‌ನ ವಿಮಾನವೊಂದು ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
ಪ್ರತಿಕೂಲ ಹವಾಮಾನ ಕಾರಣದಿಂದ ಬೋಯಿಂಗ್ 777-300ER ವಿಮಾನ ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಘಟನೆಯಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಆದರೆ ನಿಖರವಾಗಿ ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವ ಬಗ್ಗೆ ಸಿಂಗಪುರ ಏರ್‌ಲೈನ್ಸ್ ಖಚಿತಪಡಿಸಿಲ್ಲ.
ಬ್ಯಾಂಕಾಕ್‌ನ ಸುವರ್ಣಭೂಮಿ ವಿಮಾನ ನಿಲ್ದಾಣದ ಅಧಿಕಾರಿಗಳು ಒಬ್ಬ ಪ್ರಯಾಣಿಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಅಗತ್ಯ ವೈದ್ಯಕೀಯ ನೆರವು ಒದಗಿಸಲು ನಾವು ಥಾಯ್‌ಲೆಂಡ್‌ನ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.