ಕೊಚ್ಚಿ: ಶಬರಿಮಲೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸನ್ನಿಧಾನಂನಲ್ಲಿರುವ ಅತಿಥಿ ಗೃಹದ ನವೀಕರಣಕ್ಕೆ ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸುವ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ್ಯಾಯಾಧೀಶರು ಇದೇ 8ರಂದು ಸನ್ನಿಧಾನಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ.
ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಹರಿಶಂಕರ್ ಮೆನನ್ ಅವರು ತಪಾಸಣೆಯ ಭಾಗವಾಗಿ ಸನ್ನಿಧಾನಕ್ಕೆ ಖುದ್ದಾಗಿ ಭೇಟಿ ನೀಡಲಿದ್ದಾರೆ. 1.75 ಕೋಟಿ ವೆಚ್ಚದಲ್ಲಿ ಅತಿಥಿ ಗೃಹವನ್ನು ನವೀಕರಿಸಲಾಗುತ್ತಿದೆ. ತಿರುವಾಂಕೂರು ದೇವಸ್ವಂ ಮಂಡಳಿಯು ಅತಿಥಿ ಗೃಹವನ್ನು ನವೀಕರಿಸಲು ಅನುಮತಿ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು.