ಪಟ್ನಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ.
ಇದಕ್ಕೂ ಮುನ್ನ ಭಾನುವಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಮತ್ತು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅವರೊಂದಿಗೆ ಪ್ರಧಾನಿ ಪಾಟ್ನಾದಲ್ಲಿ ರೋಡ್ ಶೋ ನಡೆಸಿದ್ದರು.
ಸಂಸತ್ತಿಗೆ ಅತಿ ಹೆಚ್ಚು ಸಂಸದರನ್ನು ಕಳುಹಿಸುವ ರಾಜ್ಯಗಳಲ್ಲಿ ಬಿಹಾರವೂ ಒಂದು. ಬಿಹಾರವು 40 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಪಾತ್ರ ಹೊಂದಿದೆ. ಈ ಬಾರಿ ಏಳು ಹಂತಗಳಲ್ಲಿಯೂ ಇಲ್ಲಿ ಚುನಾವಣೆ ನಡೆಯಲಿದೆ.