ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಸಮಾಚಾರ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ, ಬಿಜೆಪಿ ನಾಯಕ ಓ ರಾಜಗೋಪಾಲ್, ಲಡಾಖ್‌ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ "ಕ್ಯಾಪ್ಟನ್" ವಿಜಯಕಾಂತ್ , ಗುಜರಾತಿ ಪತ್ರಿಕೆ "ಜನ್ಮಭೂಮಿ" ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. .