ಶಿಮ್ಲಾ: ನಟಿ ಕಂಗನಾ ರನೌತ್ ಅವರು ಇಂದು (ಮಂಗಳವಾರ) ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಮಂಡಿ ಲೋಕಸಭಾ ಚುನಾವಣೆಗೆ ಜೂನ್ 1ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಅವರು ಪೋಸ್ಟ್ ಮಾಡಿದ್ದರು.
'ಯಾರೋ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆ ತೆರೆದು ಕಂಗನಾ ಅವರ ಬಗ್ಗೆ 'ಆಕ್ಷೇಪಾರ್ಹ ಪೋಸ್ಟ್' ಅನ್ನು ಹಂಚಿಕೊಂಡಿದ್ದರು ಎಂದು ಶ್ರೀನೇತ್ ಹೇಳಿಕೆ ನೀಡಿದ್ದರು.
'ಫೋಸ್ಟ್ ಅವಹೇಳಕಾರಿಯಾಗಿದೆ ಎಂದು ತಿಳಿದ ತಕ್ಷಣ ನಾನು ಆ ಪೋಸ್ಟ್ ಅನ್ನು ಅಳಿಸಿದ್ದೇನೆ. ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ. ಇದು ನನ್ನ ಬಗ್ಗೆ ತಿಳಿದಿರುವ ಪ್ರತಿಯೊಬ್ಬರಿಗೂ ಗೊತ್ತಿರುವ ವಿಚಾರ' ಎಂದು ಹೇಳಿದ್ದರು.