ಸಾಂಗ್ಲಿ : ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಹೊರಟಿದ್ದ ಸೇನೆಯ ಹೆಲಿಕಾಪ್ಟರ್‌ನ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಾಂಗ್ಲಿ ಜಿಲ್ಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂಗ್ಲಿ ಜಿಲ್ಲೆಯ ಮೀರಜ್ ತಾಲ್ಲೂಕಿನ ಎರಂಡೋಲಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಮೂವರು ಸೇನಾ ಸಿಬ್ಬಂದಿ, ಇಬ್ಬರು ಪೈಲಟ್ ಮತ್ತು ಒಬ್ಬ ತಾಂತ್ರಿಕ ಸಿಬ್ಬಂದಿ ಹೆಲಿಕಾಪ್ಟರ್‌ನಲ್ಲಿ ಇದ್ದರು. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿಸಿದರು.
ಸ್ವಲ್ಪ ಸಮಯದ ನಂತರ ಮತ್ತೊಂದು ಹೆಲಿಕಾಪ್ಟರ್‌ನಲ್ಲಿ ಬಂದು ಸಿಬ್ಬಂದಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದರು ಎಂದು ಅಧಿಕಾರಿಗಳು ತಿಳಿದ್ದಾರೆ.