ನವದೆಹಲಿ: ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ಸ್ಥಳೀಯರು ಮತ್ತು ವಿದೇಶೀಯರ ನಡುವೆ ಗಲಭೆ ನಡೆದಿರುವ ಕಾರಣ ಅಲ್ಲಿರುವ ಭಾರತೀಯ ಮೂಲದ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಹೊರಬರದಂತೆ ಭಾರತದ ವಿದೇಶಾಂಗ ಇಲಾಖೆ ಶನಿವಾರ ಸೂಚನೆ ನೀಡಿದೆ.
ನವದೆಹಲಿ: ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ಸ್ಥಳೀಯರು ಮತ್ತು ವಿದೇಶೀಯರ ನಡುವೆ ಗಲಭೆ ನಡೆದಿರುವ ಕಾರಣ ಅಲ್ಲಿರುವ ಭಾರತೀಯ ಮೂಲದ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಹೊರಬರದಂತೆ ಭಾರತದ ವಿದೇಶಾಂಗ ಇಲಾಖೆ ಶನಿವಾರ ಸೂಚನೆ ನೀಡಿದೆ.
'ಭಾರತೀಯ ಮೂಲದ ವಿದ್ಯಾರ್ಥಿಗಳೊಂದಿಗೆ ಸಂಪರ್ದಲ್ಲಿದ್ದೇವೆ.
'ಭಾರತೀಯ ಮೂಲದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಗಮನಹರಿಸಲಾಗಿದೆ. ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರಿಗೆ ಸೂಚಿಸಲಾಗಿದೆ' ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಕಿರ್ಗಿಸ್ತಾನ ದೇಶದಲ್ಲಿ ಭಾರತೀಯ ಮೂಲದ 15 ಸಾವಿರ ವಿದ್ಯಾರ್ಥಿಗಳಿದ್ದು, ಅದರಲ್ಲಿ ಬಿಷ್ಕೆಕ್ ನಗರದಲ್ಲಿ ಎಷ್ಟು ವಿದ್ಯಾರ್ಥಿಗಳಿದ್ದಾರೆ ಎಂಬ ಬಗ್ಗೆ ಮಾಹಿತಿಗಳಿಲ್ಲ.
ಬಿಷ್ಕೆಕ್‌ನಲ್ಲಿ ಸ್ಥಳೀಯರು ಮತ್ತು ವಿದೇಶೀಯರ ನಡುವೆ ಪರಸ್ಪರ ವಾಗ್ವಾದ ನಡೆದಿದ್ದು, ಶುಕ್ರವಾರ ರಾತ್ರಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.