ನವದೆಹಲಿ: ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯನ್ನು ಸುರಕ್ಷೆತೆಯ ಏಕೈಕ ಉದ್ದೇಶವನ್ನು ಮನದಲ್ಲಿಟ್ಟುಕೊಂಡು ತಯಾರಿಸಲಾಗಿದೆ ಎಂದು ಲಸಿಕೆ ತಯಾರಿಸಿರುವ ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ.
ನವದೆಹಲಿ: ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯನ್ನು ಸುರಕ್ಷೆತೆಯ ಏಕೈಕ ಉದ್ದೇಶವನ್ನು ಮನದಲ್ಲಿಟ್ಟುಕೊಂಡು ತಯಾರಿಸಲಾಗಿದೆ ಎಂದು ಲಸಿಕೆ ತಯಾರಿಸಿರುವ ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ.
ಈ ಲಸಿಕೆಯು ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮ ಹೊಂದಿಲ್ಲ ಎಂದು ಅದು ಹೇಳಿದೆ.
ತಮ್ಮ ಲಸಿಕೆ ಪಡೆದವರ ಪೈಕಿ ವಿರಳ ಪ್ರಕರಣಗಳಲ್ಲಿ ಅಡ್ಡ ಪರಿಣಾಮ ಕಂಡುಬಂದಿದೆ ಎಂದು ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸಂಸ್ಥೆ ಆಸ್ಟ್ರಾಜೆನಿಕಾ ಒಪ್ಪಿಕೊಂಡ ಬಳಿಕ ಭಾರತ್ ಬಯೋಟೆಕ್ ಈ ಹೇಳಿಕೆ ಬಿಡುಗಡೆ ಮಾಡಿದೆ.
ಪರವಾನಗಿ ಪ್ರಕ್ರಿಯೆಯ ಭಾಗವಾಗಿ ಲಸಿಕೆಯನ್ನು 27,000ಕ್ಕೂ ಹೆಚ್ಚು ವಿಷಯಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.
ಕ್ಲಿನಿಕಲ್ ಟ್ರಯಲ್‌ನಲ್ಲಿ ನಿರ್ಬಂಧಿತ ಬಳಕೆ ಅಡಿ ಇದಕ್ಕೆ ಪರವಾನಗಿ ನೀಡಲಾಗಿತ್ತು. ಹಲವು ಆಯಾಮಗಳಲ್ಲಿ ಸುರಕ್ಷತೆಯ ಪರೀಕ್ಷೆ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ.
ಲಸಿಕೆಯನ್ನು ಕೇಂದ್ರದ ಗೃಹ ಸಚಿವಾಲಯ ಸಹ ಮೌಲ್ಯಮಾಪನ ಮಾಡಿದೆ ಎಂದೂ ಅದು ತಿಳಿಸಿದೆ.