HEALTH TIPS

ಥಾಣೆ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರ ಸಾವು, ಹಲವರಿಗೆ ಗಾಯ

           ಥಾಣೆ: ಇಲ್ಲಿನ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.


             ಡೊಂಬಿವಾಲಿ ಪ್ರದೇಶದಲ್ಲಿರುವ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರ ಮೃತಪಟ್ಟಿದ್ದು 25 ಜನರ ಗಾಯಗೊಂಡಿದ್ದಾರೆ.

8 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

            ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

           ಮಧ್ಯಾಹ್ನ 1:40ರ ಸುಮಾರಿಗೆ ಮೂರು ಸಲ ಭಾರಿ ಸ್ಫೋಟದ ಸದ್ದು ಕೇಳಿಸಿತು. ನಂತರ ಬೆಂಕಿ ಕಾಣಿಸಿಕೊಂಡಿತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದಲ್ಲಿ ಹಲವಾರು ವಾಹನಗಳು ಮತ್ತು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries