ಬಿಜಾಪುರ: ಬಿಜೆಪಿ ಮುಖಂಡರೊಬ್ಬರ ಹತ್ಯೆಯಲ್ಲಿ ಪಾತ್ರವಿದೆ ಎಂಬ ಆರೋಪ ಎದುರಿಸುತ್ತಿದ್ದ ಮೂವರು ನಕ್ಸಲರನ್ನು ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಿಜಾಪುರ: ಬಿಜೆಪಿ ಮುಖಂಡರೊಬ್ಬರ ಹತ್ಯೆಯಲ್ಲಿ ಪಾತ್ರವಿದೆ ಎಂಬ ಆರೋಪ ಎದುರಿಸುತ್ತಿದ್ದ ಮೂವರು ನಕ್ಸಲರನ್ನು ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಕ್ಸಲರ ಗುಂಪಿನ ಕಮಾಂಡರ್ ಮುನ್ನಾ ಮುದ್ಮಾ(32), ಮುಖಂಡ ಲಖ್ಮು ಮುದ್ಮಾ (39) ಹಾಗೂ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘಟನೆಯ ರಾಜು ಮುದ್ಮಾ(31) ಬಂಧಿತರು.
'ಬಿಜಾಪುರ ಜಿಲ್ಲೆಯ ಜನಪಾಡ್ ಗ್ರಾಮ ಪಂಚಾಯಿತಿ ಸದಸ್ಯ ತಿರುಪತಿ ಕಟ್ಲಾ ಎಂಬುವವರ ಕೊಲೆಯಲ್ಲಿ ಮೂವರ ಪಾತ್ರವಿದೆ ಎಂಬ ಆರೋಪವಿದೆ. ತಿರುಪತಿ ಅವರು ತೋಯ್ನಾರ್ ಗ್ರಾಮದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ, ಆರೋಪಿಗಳು ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದಿದ್ದರು ಎಂಬ ಆರೋಪ ಇದೆ' ಎಂದು ಪೊಲೀಸರು ತಿಳಿಸಿದ್ದಾರೆ.