ಮಲಪ್ಪುರಂ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಾಣವನ್ನೇ ತೆಗೆದುಕೊಂಡಿದ್ದಾಳೆ.
ಮಲಪ್ಪುರಂನ ಒತಲೂರು ಮೂಲದ ನಿವೇದಿತಾ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವೆನೆಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಆದರೆ ಆಕೆ ಅತ್ಯುತ್ತಮ ಫಲಿತಾಂಶ ಪಡೆದಿದ್ದಾಳೆ.
ಕಳೆದ ಶುಕ್ರವಾರ ನಿವೇದಿತಾ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಲ್ಲಿ ಆತ್ಮಹತ್ಯೆಗೈಯ್ಯುವುದಾಗಿ ಡೆತ್ ನೋಟ್ ಬರೆದುಕೊಂಡು ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿದ್ದಳು.