HEALTH TIPS

'ಚೀನಾದ ಐವರ ಹತ್ಯೆ: ಅಫ್ಗಾನಿಸ್ತಾನದಲ್ಲಿ ಯೋಜನೆ'

 ಸ್ಲಾಮಾಬಾದ್ (PTI): ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಐವರು ಚೀನಾ ಎಂಜಿನಿಯರ್‌ಗಳ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯು ಅಫ್ಗಾನಿಸ್ತಾನದಲ್ಲಿ ಯೋಜಿಸಲಾಗಿತ್ತು ಎಂದು ಪಾಕಿಸ್ತಾನ ಸೇನೆ ಮಂಗಳವಾರ ಆರೋಪಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಸ್‌ಪಿಆರ್ ಮುಖ್ಯಸ್ಥ ಮೇಜರ್ ಜನರಲ್ ಅಹ್ಮದ್ ಷರೀಫ್, 'ಪಾಕಿಸ್ತಾನದಲ್ಲಿ ದಾಳಿಗಳನ್ನು ನಡೆಸಲು ಉಗ್ರರಿಗೆ ತನ್ನ ನೆಲವನ್ನು ಬಳಸಿಕೊಳ್ಳಲು ಅಫ್ಗಾನಿಸ್ತಾನ ಅವಕಾಶ ಮಾಡಿಕೊಟ್ಟಿದೆ. ಈ ಆತ್ಮಾಹುತಿ ಬಾಂಬ್ ದಾಳಿಯನ್ನು ಅಫ್ಗಾನಿಸ್ತಾನದ ಪ್ರಜೆ ಎಸಗಿದ್ದ' ಎಂದು ದೂರಿದರು.

ಈ ಆತ್ಮಾಹುತಿ ದಾಳಿಯು ಅಫ್ಗಾನಿಸ್ತಾನದ ಗಡಿಯನ್ನು ಸಂಪರ್ಕಿಸುತ್ತದೆ. ಈ ಯೋಜನೆಯನ್ನು ಅಫ್ಗಾನಿಸ್ತಾನದಲ್ಲೇ ರೂಪಿಸಲಾಗಿತ್ತು. ಭಯೋತ್ಪಾದಕರು ಮತ್ತು ಭಯೋತ್ಪಾದಕ ಕೃತ್ಯಗಳಿಗೆ ವ್ಯವಸ್ಥೆ ಕಲ್ಪಿಸುವವರನ್ನು ಅಫ್ಗಾನಿಸ್ತಾನ ನಿಯಂತ್ರಿಸುತ್ತದೆ ಎಂದು ಷರೀಫ್ ಆರೋಪಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries