HEALTH TIPS

ಪೋಸ್ಟ್ ಗೀಳು | ವಿಡಿಯೊ ಚಿತ್ರೀಕರಿಸುತ್ತಿದ್ದ ಯುವತಿ ರೈಲಿಗೆ ಸಿಲುಕಿ ಸಾವು!

 ರಿದ್ವಾರ: ರೈಲು ಹಳಿಯ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದ 20 ವರ್ಷದ ಯುವತಿಯೊಬ್ಬರು ರೈಲಿಗೆ ಸಿಲುಕಿ, ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಮೃತ ಯುವತಿ ವೈಶಾಲಿಯನ್ನು ಹರಿದ್ವಾರ ಜಿಲ್ಲೆಯ ಹರಿಪುರದವರು ಎಂದು ಗುರುತಿಸಲಾಗಿದೆ.

ಈ ಘಟನೆ ಬುಧವಾರ ಸಂಜೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಲ್ಲಿನ ರಹೀಂಪುರ ರೈಲ್ವೆ ಗೇಟ್‌ ಬಳಿ ಸ್ನೇಹಿತೆಯೊಂದಿಗೆ ನಿಂತಿದ್ದ ವೈಶಾಲಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಪೋಸ್ಟ್‌ ಮಾಡುವ ಸಲುವಾಗಿ ರೈಲು ಹಳಿಗಳ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದರು. ಈ ವೇಳೆ ರೈಲಿಗೆ ಸಿಲುಕಿ ಯುವತಿ ಮೃತಪಟ್ಟಿದ್ದಾರೆ.

ಘಟನೆ ಬಳಿಕ ಸ್ನೇಹಿತೆ, ವೈಶಾಲಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries