ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‍ನ 110ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ಮೇ 5ರಂದು ಸಂಜೆ 4ಕ್ಕೆ ಕಾಸರಗೋಡಿನ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್‍ನಾರಾಯಣ್ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ವೈ. ಸತ್ಯನಾರಾಯಣ ಮುಖ್ಯ ಅತಿಥಿಯಾಗಿ ಭಾಗವಹಿಸುವರು. 'ಜನಸಾಮಾನ್ಯರತ್ತ ಕನ್ನಡ ಸಾಹಿತ್ಯ ಪರಿಷತ್'ಎಂಬ ವಿಷಯದಲ್ಲಿ ರಾಜಾರಾಮ ರಾವ್ ಮೀಯಪದವು ಉಪನ್ಯಾಸ ನೀಡುವರು.