ಇಂಫಾಲ: ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿಯ (ಪೀಪಲ್ ವಾರ್ ಗ್ರೂಪ್) ನಾಲ್ವರು ಉಗ್ರರನ್ನು ಮಣಿಪುರ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಇಂಫಾಲ: ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿಯ (ಪೀಪಲ್ ವಾರ್ ಗ್ರೂಪ್) ನಾಲ್ವರು ಉಗ್ರರನ್ನು ಮಣಿಪುರ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಉಗ್ರರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ, ಯೈರಿಪೋಕ್ ಬಜಾರ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಂಧಿತರಿಂದ ಐದು ಮೊಬೈಲ್, 9 ಎಂಎಂನ 2 ಪಿಸ್ತೂಲ್ ಮತ್ತು 15 ಜೀವಂತ ಗುಂಡುಗಳು, 5.56 ಎಂಎಂನ 20 ಮದ್ದುಗುಂಡುಗಳು, 7.62 ಎಂಎಂನ 4 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ನಿನ್ನೆ (ಮೆ.16) ಇದೇ ಸಂಘಟನೆಯ ಉಗ್ರನೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಈತ ಇಂಫಾಲ್ ಪ್ರದೇಶದ ಪಾವೊನಾ ಮತ್ತು ತಂಗಲ್ ಬಜಾರ್‌ನಲ್ಲಿರುವ ಅಂಗಡಿಗಳಲ್ಲಿ ಹಣ ಸುಲಿಗೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.