ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಮಹಿಷಾದಲ್‌ನಲ್ಲಿ ಶುಕ್ರವಾರ ತಡರಾತ್ರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಮಹಿಷಾದಲ್‌ನಲ್ಲಿ ಶುಕ್ರವಾರ ತಡರಾತ್ರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮ್ಲುಕ್ ಸೇರಿದಂತೆ ಇತರೆ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಇಂದು (ಶನಿವಾರ) ಮತದಾನ ನಡೆಯುತ್ತಿದೆ.
ಮೊಯಿಬುಲ್ ಶೇಖ್ ಶುಕ್ರವಾರ ಸಂಜೆ ಮನೆಗೆ ವಾಪಸಾಗುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಿಜೆಪಿಯ ಗೂಂಡಾಗಳ ಗುಂಪೊಂದು ಶೇಖ್ ಮತ್ತು ಇತರ ಇಬ್ಬರು ಕಾರ್ಯಕರ್ತರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ ಎಂದು ಟಿಎಂಸಿ ಶಾಸಕ ತಿಲಕ್ ಚಕ್ರವರ್ತಿ ಆರೋಪಿಸಿದ್ದಾರೆ.
ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಶೇಖ್ ಅವರು ಆಸ್ಪತ್ರೆಗೆ ಕರೆದೊಯ್ದ ವೇಳೆ ಮೃತಪಟ್ಟಿದ್ದಾರೆ. ಇತರ ಇಬ್ಬರು ಕಾರ್ಯಕರ್ತರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಕ್ರವರ್ತಿ ವಿವರಿಸಿದ್ದಾರೆ.
ತಮ್ಲುಕ್ ಲೋಕಸಭಾ ಕ್ಷೇತ್ರದಿಂದ ಕಲ್ಕತ್ತ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇತ್ತ ಟಿಎಂಸಿ ಅಭ್ಯರ್ಥಿಯಾಗಿ ದೇಬಾಂಗ್‌ಶು ಭಟ್ಟಾಚಾರ್ಯ ಸ್ಪರ್ಧಿಸಿದ್ದಾರೆ.
ಈಚೆಗೆ ಇದೇ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತೆಯ ಹತ್ಯೆಯಾಗಿತ್ತು.