HEALTH TIPS

ಉತ್ತರಾಖಂಡ ರಸ್ತೆ ಅಪಘಾತ : 12 ಮಂದಿ ಸಾವು: ರಾಷ್ಟ್ರಪತಿ ಮುರ್ಮು, ಶಾ ಸಂತಾಪ

          ವದೆಹಲಿ: ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂತಾಪ ಸೂಚಿಸಿದ್ದಾರೆ.

             ಶನಿವಾರ ಬೆಳಿಗ್ಗೆ ಉತ್ತರಾಖಂಡದ ರಿಷಿಕೇಶ-ಬದರಿನಾಥ ಹೆದ್ದಾರಿಯಲ್ಲಿ ಟೆಂಪೊ ಟ್ರಾವೆಲರ್‌ ಕಮರಿಗೆ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.


              ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಮುರ್ಮು, 'ಉತ್ತರಾಖಂಡದ ರುದ್ರಪಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವು ಜನರು ಸಾವಿಗೀಡಾಗಿರುವ ಸುದ್ದಿ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.

           'ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತ ಸುದ್ದಿಯು ದುಃಖಕರವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries