ಭುವನೇಶ್ವರ: ಒಡಿಶಾದ ಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಪಟಾಕಿ ಸ್ಫೋಟ ಘಟನೆಯಲ್ಲಿ ಗಾಯಗೊಂಡಿದ್ದವರ ಪೈಕಿ ಬುಧವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ವಿಶೇಷ ಆಯುಕ್ತರು ಬುಧವಾರ ತಿಳಿಸಿದ್ದಾರೆ.

ಪುರಿ, ಭುವನೇಶ್ವರ ಮತ್ತು ಕಟಕ್‌ನಲ್ಲಿರುವ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ಮಂದಿ ಗಾಯಾಳುಗಳ ಪೈಕಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೇ 29ರಂದು ಪುರಿಯಲ್ಲಿ ರಾತ್ರಿ ನಡೆದ 'ಜಗನ್ನಾಥ ಚಂದನ್ ಯಾತ್ರೆ' ವೇಳೆ ನಡೆದ ಪಟಾಕಿಗಳ ಸ್ಫೋಟದಲ್ಲಿ ಒಟ್ಟಾರೆ 36 ಮಂದಿ ಗಾಯಗೊಂಡಿದ್ದರು. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ.