HEALTH TIPS

ನೀಟ್ : 1,563 ವಿದ್ಯಾರ್ಥಿಗಳ ಕೃಪಾಂಕ ರದ್ದು: ಮರು ಪರೀಕ್ಷೆಗೆ ಅವಕಾಶ

           ವದೆಹಲಿ: ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

           ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಪರ ವಕೀಲರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ರಜಾಕಾಲದ ಪೀಠಕ್ಕೆ ಈ ಮಾಹಿತಿ ನೀಡಿದರು. ಜೂನ್‌ 23ರಂದು ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದರು.

           ಒಂದು ವೇಳೆ ಈ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಬಯಸದಿದ್ದರೆ, ಈ ಹಿಂದೆ ನಡೆದ ಪರೀಕ್ಷೆಯಲ್ಲಿ (ಕೃಪಾಂಕ ಬಿಟ್ಟು) ಪಡೆದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.

                 ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು. ಎಂಬಿಬಿಎಸ್, ಬಿಡಿಎಸ್, ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಈ ವೇಳೆ ಕೇಂದ್ರ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries