HEALTH TIPS

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: ಮೃತರ ಸಂಖ್ಯೆ 15ಕ್ಕೆ ಏರಿಕೆ

         ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲಪಾಯ್‌ಗುರಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಮೃತರ ಸಂಖ್ಯೆ 15ಕ್ಕೆ ಏರಿದೆ. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

         ಡಿಕ್ಕಿಯ ರಭಸಕ್ಕೆ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಕತಿಹಾರ್ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಹೇಳಿದ್ದಾರೆ.

             'ಈವರೆಗೆ 15 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ'ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


             ಡಾರ್ಜಿಲಿಂಗ್ ಜಿಲ್ಲೆಯ ಫನಸಿದೇವ್ ಪ್ರದೇಶದಲ್ಲಿ ಸಂಭವಿಸಿರುವ ರೈಲು ಅಪಘಾತದ ಸುದ್ದಿ ಕೇಳಿ ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌‍ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ'ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

             'ಡಿಎಂ. ಎಸ್‌ಪಿ, ವೈದ್ಯರು, ಆಯಂಬುಲೆನ್ಸ್‌ಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ' ಎಂದೂ ಅವರು ತಿಳಿಸಿದ್ಧಾರೆ.

            13174 ಸಂಖ್ಯೆಯ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಸಿಯಾಲ್ಡಹ್‌ಗೆ ತೆರಳುತ್ತಿತ್ತು. ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಎನ್‌ಎಫ್‌ಆರ್ ವಲಯದಲ್ಲಿ ದುರದೃಷ್ಟಕರ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ. ರೈಲ್ವೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ' ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries