HEALTH TIPS

ಇಡಿಯಡ್ಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ 1801ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

            ಪೆರ್ಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಜೇಶ್ವರ ತಾಲೂಕು ಸಮಿತಿ ವತಿಯಿಂದ 1801ನೇ ಮದ್ಯವರ್ಜನ ಶಿಬಿರ ಪೆರ್ಲ ಸನಿಹದ ಇಡಿಯಡ್ಕದ ಶ್ರೀದುರ್ಗಾಪರಮೇಶ್ವರಿ ಕ್ಷೇತ್ರದ  ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಮಂಗಳವಾರ ಆರಂಭಗೊಂಡಿತು.  

              ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಇದರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಪೆರ್ಲ ವಲಯ,ನವಜೀವನ ಸಮಿತಿ, ಸ್ಥಳೀಯರ ಸಹಕಾರದೊಂದಿಗೆ ಶಿಬಿರ ನಡೆಯಲಿದೆ. 

         ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ ಸಮಾರಂಭ ಉದ್ಘಾಟಿಸಿದರು. ಮಂಜೇಶ್ವರ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆವಹಿಸಿದ್ದರು. ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್ ಜೆ.ಎಸ್, ಜನ ಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ವಲಯ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಕ್ಯಾಂಪೆÇ್ಕೀ ಉಪಾಧ್ಯಕ್ಷ ಶಂ.ನಾ.ಖಂಡಿಗೆ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್ ಆನೆ ಬಾಗಿಲು, ಎಣ್ಮಕಜೆ ಗ್ರಾ.ಪಂ.ಸದಸ್ಯೆ ಇಂದಿರಾ, ಪ್ರಗತಿಬಂಧು ಪೆರ್ಲ ವಲಯಾಧ್ಯಕ್ಷ ಶ್ರೀಧರ ಮಣಿಯಾಣಿ, ಜನ ಜಾಗೃತಿ ಪೆರ್ಲ ವಲಯಾಧ್ಯಕ್ಷ ಬಿ.ಪಿ.ಶೇಣಿ, ಭಜನಾ ಪರಿಷತ್ ವಲಯಾಧ್ಯಕ್ಷ ಶ್ರೀಧರ ನಾಯಕ್, ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಮಾಸ್ಟರ್ ಸುರೇಂದ್ರ ಬಿ, ಡಾ.ಸ್ವಪ್ನಾ ಜೆ.ಉಕ್ಕಿನಡ್ಕ, 1801ನೇ ಮದ್ಯವರ್ಜನ ಸಮಿತಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕುದ್ವ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ ಉಪಸ್ಥಿತರಿದ್ದರು. ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಧ.ಗ್ರಾ.ಯೋಜನೆಯ ಪೆರ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿದರು. ಭಾಸ್ಕರ್ ನಿರೂಪಿಸಿದರು. ಮೇಲ್ವಿಚಾರಕ ರಮೇಶ್ ವಂದಿಸಿದರು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries