HEALTH TIPS

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

 ವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ.


ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.

ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪಿಸಿ, ಅನುಮೋದಿಸಿದರು.

ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು.

ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ, ಸಚಿವ ಕಿರಣ್ ರಿಜಿಜು ಹಾಗೂ ರಾಹುಲ್ ಗಾಂಧಿ ಅವರು ನೂತನ ಸ್ಪೀಕರ್‌ ಅವರನ್ನು ಪೀಠಕ್ಕೆ ಕರೆತಂದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries