HEALTH TIPS

ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ 18ರಂದು ವಾರಾಣಸಿಯಲ್ಲಿ ಬಿಡುಗಡೆ

          ವದೆಹಲಿಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 18 ರಂದು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಪಿಎಂ ಕಿಸಾನ್ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ದೇಶಾದ್ಯಂತ 9.26 ಕೋಟಿ ಫಲಾನುಭವಿ ರೈತರಿಗೆ 20,000 ಕೋಟಿ ರೂ. ಮೊತ್ತದ ಹಣ ಈ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

                   ಕೃಷಿ ಪದ್ಧತಿಗಳೊಂದಿಗೆ ಸಹವರ್ತಿ ರೈತರನ್ನು ಬೆಂಬಲಿಸುವ, ಅರೆ ವಿಸ್ತರಣಾ ಕಾರ್ಯಕರ್ತರಾಗಿ ಕೆಲಸ ಮಾಡಲು 'ಕೃಷಿ ಸಖಿಗಳು' ಎಂದು ತರಬೇತಿ ಪಡೆದಿರುವ ಸ್ವಸಹಾಯ ಗುಂಪುಗಳ 30,000ಕ್ಕೂ ಹೆಚ್ಚು ಸದಸ್ಯರಿಗೆ ಮೋದಿ ಪ್ರಮಾಣಪತ್ರಗಳನ್ನು ಈ ಸಂದರ್ಭದಲ್ಲಿ ನೀಡಲಿದ್ದಾರೆ.

           ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕೃಷಿ ಕ್ಷೇತ್ರಕ್ಕೆ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.

            'ಕಳೆದ ಎರಡು ಅಧಿಕಾರಾವಧಿಯಲ್ಲಿ ಪ್ರಧಾನಿಗೆ ಕೃಷಿ ಯಾವಾಗಲೂ ಆದ್ಯತೆಯಾಗಿದೆ. ಅವರು ರೈತರ ಹಿತದೃಷ್ಟಿಯಿಂದ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು. ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಮೋದಿ ಅವರು ಮೊದಲು ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ಬಿಡುಗಡೆಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿದರು' ಎಂದು ಚೌಹಾಣ್ ಹೇಳಿದರು.

2019 ರಲ್ಲಿ ಪ್ರಾರಂಭವಾದ, ಪಿಎಂ ಕಿಸಾನ್ ಯೋಜನೆಯು ನೇರ ಲಾಭ ವರ್ಗಾವಣೆ ಉಪಕ್ರಮವಾಗಿದ್ದು, ಇದರ ಅಡಿಯಲ್ಲಿ ಫಲಾನುಭವಿ ರೈತರು ತಮ್ಮ ಹಣಕಾಸಿನ ಅಗತ್ಯಗಳಿಗೆ ಪೂರಕವಾಗಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂಪಾಯಿಗಳನ್ನು ಪಡೆಯುತ್ತಾರೆ.

ಯೋಜನೆ ಪ್ರಾರಂಭವಾದಾಗಿನಿಂದ ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ ಕೇಂದ್ರವು 3.04 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಿದೆ ಎಂದು ಚೌಹಾಣ್ ತಿಳಿಸಿದರು.

           ವಾರಾಣಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ವಿವಿಧ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ.

             ಕೃಷಿ ಸಚಿವರು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸಹಯೋಗದ ಪ್ರಯತ್ನವಾದ ಕೃಷಿ ಸಖಿ ಯೋಜನೆ ಬಗ್ಗೆ ಸಚಿವರು ಬೆಳಕು ಚೆಲ್ಲಿದರು. ಈ ಯೋಜನೆಯು ರೈತ ಸಮುದಾಯಕ್ಕೆ ಸಹಾಯ ಮಾಡಲು ಮತ್ತು ಹೆಚ್ಚುವರಿ ಆದಾಯವನ್ನು ಗಳಿಸಲು ಸ್ವಸಹಾಯ ಗುಂಪುಗಳ 90,000 ಮಹಿಳೆಯರಿಗೆ ಅರೆ-ವಿಸ್ತರಣಾ ಕೃಷಿ ಕಾರ್ಮಿಕರಾಗಿ ತರಬೇತಿ ನೀಡುವ ಗುರಿಯನ್ನು ಹೊಂದಿದೆ. ಇಲ್ಲಿಯವರೆಗೆ, ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಜಾರ್ಖಂಡ್, ಆಂಧ್ರಪ್ರದೇಶ, ಮತ್ತು ಮೇಘಾಲಯ ಸೇರಿ 12 ರಾಜ್ಯಗಳಾದ್ಯಂತ ಉದ್ದೇಶಿತ 70,000 ಜನರಲ್ಲಿ 34,000 ಕ್ಕೂ ಹೆಚ್ಚು ಕೃಷಿ ಸಖಿಗಳನ್ನು ಅರೆ-ವಿಸ್ತರಣಾ ಕಾರ್ಯಕರ್ತರೆಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದರು.

              ಸರ್ಕಾರವು ಕೃಷಿ ಕ್ಷೇತ್ರಕ್ಕಾಗಿ 100 ದಿನಗಳ ಯೋಜನೆ ಸಿದ್ಧಪಡಿಸುತ್ತಿದೆ, ರೈತರ ಕಲ್ಯಾಣ ಮತ್ತು ದೇಶದ ಕೃಷಿ ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಅವರು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries