HEALTH TIPS

ಅಸ್ಸಾಂನಲ್ಲಿ ಮುಂದುವರಿದ ಪ್ರವಾಹ ಸ್ಥಿತಿ: 1 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

             ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಮುಂದುವರಿದಿದ್ದು 10 ಜಿಲ್ಲೆಗಳ 1.17 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಮಾಹಿತಿ ನೀಡಿದ್ದಾರೆ.

           ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, '27 ಕಂದಾಯ ವಲಯಗಳ 968 ಗ್ರಾಮಗಳಿಗೆ ನೀರು ನುಗ್ಗಿದೆ.


             ಅಧಿಕಾರಿಗಳು ಸದ್ಯ 134 ಪರಿಹಾರ ಶಿಬಿರಗಳನ್ನು ಮತ್ತು 94 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆದಿದ್ದು, 17,661 ಜನರು ಪ್ರಸ್ತುತ ಆಶ್ರಯ ಪಡೆಯುತ್ತಿದ್ದಾರೆ. ಕುಶಿಯಾರಾ ನದಿಯು ಬರಾಕ್ ಕಣಿವೆಯ ಕರೀಮ್‌ಗಂಜ್‌ನಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ' ಎಂದು ಬರೆದುಕೊಂಡಿದ್ದಾರೆ.

          ಅಸ್ಸಾಂನಲ್ಲಿ ಮಳೆ ಸಂಬಂಧಿ ಅವಘಡಗಳಿಂದ ಈವರೆಗೆ ಇಬ್ಬರು ಮೃತಪಟ್ಟಿದ್ದಾರೆ. 3,995.33 ಹೆಕ್ಟೇರ್‌ನ ಬೆಳೆ ನೀರಿನಲ್ಲಿ ಮುಳುಗಿದೆ, 47,795 ಕೋಳಿ ಸೇರಿದಂತೆ 2,20,546 ಪ್ರಾಣಿಗಳಿಗೆ ಹಾನಿಯುಂಟಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ)ವಿವರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries