ನವದೆಹಲಿ: ನಡೆದಿರುವ ಅಪರಾಧದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು, ಆನ್‌ಲೈನ್ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಹೇಯ ಅಪರಾಧ ನಡೆದಾಗ ಆ ಸ್ಥಳವನ್ನು ಚಿತ್ರೀಕರಿಸುವುದನ್ನು ಕಡ್ಡಾಯಗೊಳಿಸಿರುವುದು ಜುಲೈ 1ರಿಂದ ಜಾರಿಗೆ ಬರಲಿರುವ ಕ್ರಿಮಿನಲ್ ಅಪರಾಧ ಕಾನೂನುಗಳಲ್ಲಿ ಇರುವ ಪ್ರಮುಖ ಅಂಶಗಳು.
ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಲ್ಲರಿಗೂ ದಕ್ಷವಾಗಿ ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸುವಲ್ಲಿ ಇರಿಸಿರುವ ಗಮನಾರ್ಹ ಹೆಜ್ಜೆ ಎಂದು ಮೂಲಗಳು ಹೇಳಿವೆ.
ಈ ಮೂರು ಕಾನೂನುಗಳು ಬ್ರಿಟಿಷ್ ಕಾಲದಲ್ಲಿ ರೂಪುಗೊಂಡ ಭಾರತೀಯ ದಂಡ ಸಂಹಿತೆ, ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಜಾರಿಗೆ ಬರಲಿವೆ.