ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, 2019ರ ಚುನಾವಣೆಗೆ ಹೋಲಿಸಿದರೆ 2024ರ ಲೋಕಸಭಾ ಚುನಾವಣೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಂದ ಹೆಚ್ಚಿನ ಮತದಾನ ನಡೆದಿದೆ.
2019ರಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮತದಾನ ಪ್ರಮಾಣ ಶೇ.14.58ರಷ್ಟಿತ್ತು. 2024ರಲ್ಲಿ ಮತದಾನ ಪ್ರಮಾಣ ಶೇ.25ರಷ್ಟಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
2011ರ ಜನಗಣತಿಯ ಪ್ರಕಾರ ದೇಶದಲ್ಲಿ 4,87,803 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ.
18ನೇ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 99 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್ ಎರಡನೇ ದೊಡ್ಡ ಪಕ್ಷವಾಗಿದೆ. 37 ಸ್ಥಾನಗಳನ್ನು ಪಡೆದಿರುವ ಎಸ್‌ಪಿ ಮೂರನೇ ಸ್ಥಾನದಲ್ಲಿದೆ.