ಪಟ್ನಾ: ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷವು ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿಯ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಪಟ್ನಾ: ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷವು ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿಯ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮರ್ ನೇತೃತ್ವದ ಜೆಡಿ(ಯು) ಪಕ್ಷವು ಬಿಜೆಪಿ, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ಹಿಂದೂಸ್ಥಾನಿ ಅವಾಮ್ ಮೊರ್ಚಾದೊಂದಿಗೆ ಮೈತ್ರಿ ಮಾಡಿಕೊಂಡು 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 12ರಲ್ಲಿ ಗೆಲವು ಕಂಡಿದೆ.
ಲೋಕಸಭೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಬಹುಮತ ಸಾಧಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಬೆಂಬಲ ಅಗತ್ಯವಾಗಿತ್ತು.
ಈ ರಾಜಕೀಯ ಬೆಳವಣಿಗೆಯ ನಡುವೆ, '2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷವು ನಿತೀಶ್ ಕುಮಾರ್ ನೇತೃತ್ವದಲ್ಲಿ ಸ್ಪರ್ಧಿಸಲಿದೆ. ಅದಕ್ಕಾಗಿ ತಯಾರಿಯನ್ನು ಆರಂಭಿಸಲಾಗಿದೆ' ಎಂದು ಸಾಮ್ರಾಟ್ ಚೌಧರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಲೋಕಸಬಾ ಚುನಾವಣೆಯಲ್ಲಿ ಮತದಾರರು ಶೇ 75 ರಷ್ಟು (12 ಕ್ಷೇತ್ರಗಳಲ್ಲಿ ಗೆಲುವು) ಅಂಕ ನೀಡಿದ್ದಾರೆ. ಸೋತ ಕ್ಷೇತ್ರಗಳಲ್ಲಿ ಆಗಿರುವ ತಪ್ಪುಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.