ಮಧೂರು: ಕುಂಬಳೆ ಸೀಮೆಂiÀತಿತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ, ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭ 2025ನೇ ಮಾರ್ಚ್ 30ರಂದು ನಡೆಸಲು ದೇವಾಲಯ ಸಭಾಂಗಣದಲ್ಲಿ ಆಯೋಜಿಸಲಾದ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ದೇವಸ್ಥಾನದ ಪವಿತ್ರಪಾಣಿ ರತನ್‍ಕುಮಾರ್ ಕಾಮಡ ಸಮಾರಂಭ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಬಿ.ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ದೇವಾಲಯದ ನಡೆಯಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಸ್ವಂ ಮಂಡಳಿ ಸಹಾಯಕ ಆಯುಕ್ತ ಪ್ರದೀಪ್ ಕುಮಾರ್, ದೇವಸ್ಥಾನದ ಕಾರ್ಯಕ್ರಮ ನಿರ್ವಹಣಾಧಿಕಾರಿ ಟಿ. ರಾಜೇಶ್, ಐ. ಲಕ್ಷ್ಮಣ ಪೆರಿಯಡ್ಕ, ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಮಂಜುನಾಥ ಕಾಮತ್, ಮಧುಸೂಧನ ಆಯರ್ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ನಾರಾಯಣಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ ಸ್ವಾಗತಿಸಿದರು. ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಭಕ್ತಜನ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಭಾಶಂಕರ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಕೆ. ಗಿರೀಶ್ ವಂದಿಸಿದರು.
ನೂತನ ಅಧ್ಯಕ್ಷರ ಆಯ್ಕೆ:
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಕಳೆದ 13ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯು.ಟಿ ಆಳ್ವ ಅವರ ನಿಧನದ ಹಿನ್ನೆಲೆಯಲ್ಲಿ ಸಮಿತಿ ಉಪಾಧ್ಯಕ್ಷರಾಗಿದ್ದ ಡಾ. ಬಿ.ಎಸ್ ರಾವ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯನ್ನು 2010ರಲ್ಲಿ ರಚಿಸಲಾಗಿದ್ದು, 14ವರ್ಷಗಳ ನಂತರ ಭಕ್ತಾದಿಗಳ ಆಶಯದಂತೆ ದಿನಾಂಕ ಘೋಷಣೆಯಾಗಿದೆ. ದೇವಾಲಯದಲ್ಲಿ ಇದುವರೆಗೆ 22ಕೋಟಿ ರೂ. ಮೊತ್ತದ ನವೀಕರಣ ಕಾರ್ಯ ನಡೆಸಲಾಗಿದ್ದು, ಇದರಲ್ಲಿ 18ಕೋಟಿ ರೂ. ಮೊತ್ತವನ್ನು ಭಕ್ತಾದಿಗಳು ಉದಾರವಾಗಿ ನೀಡಿದ್ದಾರೆ. ಉಳಿದ ಮೊತ್ತ ದೇವಸ್ವಂ ಮಂಡಳಿ ಬ್ರಹ್ಮಕಲಶೋತ್ಸವ ಸಮಿತಿಗೆ ನೀಡಿದೆ.