ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 3,90,030 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಯ್‌ಬರೇಲಿಯಲ್ಲಿ 3.9 ಲಕ್ಷ ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ
0
ಜೂನ್ 05, 2024
Tags
ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 3,90,030 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಆ ಮೂಲಕ ಗೆಲುವಿನ ಅಂತರದಲ್ಲಿ ತಾಯಿ ಸೋನಿಯಾ ಗಾಂಧಿ ಅವರನ್ನು ಮೀರಿಸಿದ್ದಾರೆ. 2019ರಲ್ಲಿ ಸೋನಿಯಾ ಗಾಂಧಿ 1,67,178 ಮತಗಳ ಅಂತರದ ಗೆಲುವು ಸಾಧಿಸಿದ್ದರು.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಹುಲ್ ಗಾಂಧಿ 6,87,649 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ 2,97,619 ಮತಗಳನ್ನು ಪಡೆದಿದ್ದಾರೆ. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಠಾಕೂರ್ ಪ್ರಸಾದ್ ಯಾದವ್ 21,624 ಮತಗಳನ್ನು ಪಡೆದಿದ್ದಾರೆ.
5 ವರ್ಷಗಳ ಹಿಂದೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ 1,67,178 ಮತಗಳ ಅಂತರದಿಂದ ಗೆದ್ದಿದ್ದರು.
2004 ರಿಂದ ನಿರಂತರವಾಗಿ ರಾಯ್‌ಬರೇಲಿಯಿಂದ ಲೋಕಸಭೆಗೆ ಚುನಾಯಿತರಾಗಿದ್ದ ಸೋನಿಯಾ ಗಾಂಧಿ, ಈ ವರ್ಷದ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾದರು.
ರಾಹುಲ್ ಗಾಂಧಿ ಅವರು, 2004 ರಿಂದ 2019 ರವರೆಗೆ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಆದರೆ ಕೇರಳದ ವಯನಾಡ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.