ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಕೇಂದ್ರ ಸಂಪುಟ ಸಭೆ ನಡೆಯುತ್ತಿದೆ.
ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ನೆರವು ನೀಡುವ ಪಿಎಂಎವೈ ಯೋಜನೆಯನ್ನು ಕೇಂದ್ರ ಸರ್ಕಾರವು 2015-16ರಲ್ಲಿ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ, ಇದುವರೆಗೆ 4.21 ಕೋಟಿ ಮನೆಗಳು ನಿರ್ಮಾಣವಾಗಿವೆ.