ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 17 ಜಿಲ್ಲೆಗಳಲ್ಲಿ ಸುಮಾರು ಮೂರು ಲಕ್ಷ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 17 ಜಿಲ್ಲೆಗಳಲ್ಲಿ ಸುಮಾರು ಮೂರು ಲಕ್ಷ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ವರದಿಯ ಪ್ರಕಾರ, ಪ್ರವಾಹದ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ಕರೀಂಗಂಜ್‌ನಲ್ಲಿ ಅತಿ ಹೆಚ್ಚು 2.5 ಲಕ್ಷ ಜನರು ತೊಂದರೆಗೆ ಸಿಲುಕಿದ್ದಾರೆ ಎಂದು ತಿಳಿಸಿದೆ. ಸಂಕಷ್ಟಕ್ಕೆ ಸಿಲುಕಿದ ಜನರಿಗಾಗಿ ವಿವಿಧ ಜಿಲ್ಲೆಗಳಲ್ಲಿ ಶಿಬಿರಗಳನ್ನು ತೆರೆಯಲಾಗಿದೆ. ಸಂತ್ರಸ್ತರಿಗೆ ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತಿದೆ.
ಈ ವರ್ಷ ಸಂಭವಿಸಿದ ಭೂಕುಸಿತ, ಬಿರುಗಾಳಿ ಹಾಗೂ ಪ್ರವಾಹ ಸೇರಿದಂತೆ ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ 35 ಮಂದಿ ಮೃತಪಟ್ಟಿದ್ದಾರೆ.
979 ಗ್ರಾಮಗಳು ಜಲಾವೃತಗೊಂಡಿದ್ದು, ರಾಜ್ಯದೆಲ್ಲೆಡೆ 3,326.31 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಎಎಸ್‌ಡಿಎಂಎ ತಿಳಿಸಿದೆ.