HEALTH TIPS

3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸತತ ಮೂರು ಅವಧಿಗೆ ಆಯ್ಕೆಯಾದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯದ ನಂತರದ ದೇಶದ ಮೊದಲ ನಾಯಕ ಜವಾಹರಲಾಲ್ ನೆಹರು ಅವರು ಬ್ರಿಟನ್‌ನಿಂದ 1947 ರಲ್ಲಿ ಸ್ವಾತಂತ್ರ್ಯ ಪಡೆದ ನಂತರ 17 ವರ್ಷಗಳ ಕಾಲ ಭಾರತದ  ಆಡಳಿತ ಚುಕ್ಕಾಣಿ ಹಿಡಿದಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries