ಕಾಸರಗೋಡು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ ಪೆರಿಯ ಕ್ಯಾಂಪಸ್ ಶಿಕ್ಷಣಾಲಯಗಳಿಗೆ ಜೂ. 4ರಂದು ರಜೆ ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಕೆ. ಇನ್ಬಾಶೇಖರ್ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಿಗೆ ಸೂಚಿಸಿದ್ದಾರೆ.