ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಇಂದು (ಬುಧವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತೀಯರು ಸೇರಿದಂತೆ 41 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಇಂದು (ಬುಧವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತೀಯರು ಸೇರಿದಂತೆ 41 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಸಂಬಂಧಿಕರು ಮತ್ತು ಗಾಯಾಳುಗಳಿಗೆ ನೆರವಾಗಲು ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ: +965-65505246 ಅನ್ನು ಆರಂಭಿಸಲಾಗಿದೆ. ಸಾಧ್ಯವಾದ ಮಟ್ಟಿಗೆ ನೆರವು ಒದಗಿಸಲು ರಾಯಭಾರ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ಕುವೈತ್‌ನ ಒಟ್ಟು ಜನಸಂಖ್ಯೆಯಲ್ಲಿ ಭಾರತೀಯರು ಶೇಕಡ 21ರಷ್ಟಿದ್ದು, (1 ಮಿಲಿಯನ್) ಆ ಪೈಕಿ ಉದ್ಯೋಗಿಗಳ ಪ್ರಮಾಣ ಶೇಕಡ 30ರಷ್ಟಿದೆ (9 ಲಕ್ಷ) ಎಂದು ಹೇಳಲಾಗಿದೆ.
'ಕುವೈತ್‌ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದಕ್ಕೆ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಯಭಾರ ಕಚೇರಿ ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ' ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.