HEALTH TIPS

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ: 43 ಕ್ಷೇತ್ರಗಳಲ್ಲಿ 'INDIA' ಮುನ್ನಡೆ

        ಖನೌ80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಎನ್‌ಡಿಎ ಮತ್ತು 'ಇಂಡಿಯಾ' ಎರಡಕ್ಕೂ ಅತ್ಯಂತ ಪ್ರಮುಖವಾದದ್ದಾಗಿದೆ. 2019ರ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ ಹಿನ್ನಡೆ ಅನುಭವಿಸಿದೆ.

           ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ 'ಇಂಡಿಯಾ' ಬಣ, 36 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

           ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಡುವೆ ನಿಕಟ ಪೈಪೋಟಿ ಇದ್ದು, 8 ಕ್ಷೇತ್ರಗಳಲ್ಲಿ ರಾಕಾಂಗ್ರೆಸ್ ಮುನ್ನಡೆ ಪಡೆದಿದೆ.

              ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆ ಕಾಯ್ದುಕೊಂಡಿದ್ದರೆ, ಅಮೇಠಿಯಲ್ಲಿ ಸ್ಮೃತಿ ಇರಾನಿ ಹಿನ್ನಡೆಯಲ್ಲಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಎಸ್‌ಪಿ 10, ಎಸ್‌ಪಿ 5 ಮತ್ತು ಅಪ್ನಾ ದಳ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries