ನವದೆಹಲಿ: ಪೂರ್ವ ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಗಾಜಿಯಾಬಾದ್ ಮೂಲದ ಇಬ್ಬರು ಚಾರ್ಟರ್ಡ್ ಅಕೌಂಟೆಂಟ್‌ಗಳಿಂದ ₹50 ಲಕ್ಷ ಸುಲಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಪೂರ್ವ ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಗಾಜಿಯಾಬಾದ್ ಮೂಲದ ಇಬ್ಬರು ಚಾರ್ಟರ್ಡ್ ಅಕೌಂಟೆಂಟ್‌ಗಳಿಂದ ₹50 ಲಕ್ಷ ಸುಲಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಸ್ಥಾನದಿಂದ ಕೆಲವು ಮೀಟರ್ ದೂರದಲ್ಲಿರುವ ಪಾಂಡವ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವ್ಯಕ್ತಿಯೊಬ್ಬರಿಂದ ಹಣ ಪಡೆದುಕೊಂಡು ಚಾರ್ಟರ್ಡ್ ಅಕೌಂಟೆಂಟ್‌ಗಳಾದ ಮೋಹಿತ್ ಶರ್ಮಾ ಮತ್ತು ಅರುಣ್ ತ್ಯಾಗಿ ಅವರು ಬೈಕ್‌ನಲ್ಲಿ ಗಾಜಿಯಾಬಾದ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ನಾಲ್ವರು ಬಂದೂಕು ತೋರಿಸಿ ಹಣ ನೀಡುವಂತೆ ಬೆದರಿಕೆ ಒಡ್ಡಿದ್ದರು.
ಶರ್ಮಾ ಮತ್ತು ತ್ಯಾಗಿ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಸಾಧ್ಯವಾಗಲಿಲ್ಲ. ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಓರ್ವ ಆರೋಪಿ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಉಳಿದ ಮೂವರು ಹಣವಿದ್ದ ಬ್ಯಾಗನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದು, ಒಬ್ಬ ಆರೋಪಿಯನ್ನು ಕೆಲವು ದಾರಿಹೋಕರು ಮತ್ತು ಪ್ರಯಾಣಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.