ನವದೆಹಲಿ: ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಅಭ್ಯರ್ಥಿಗಳ ಮುನ್ನಡೆ ಹಾಗೂ ಹಿನ್ನಡೆ ಕುರಿತು ಚರ್ಚಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.
ನವದೆಹಲಿ: ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಅಭ್ಯರ್ಥಿಗಳ ಮುನ್ನಡೆ ಹಾಗೂ ಹಿನ್ನಡೆ ಕುರಿತು ಚರ್ಚಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.
ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
2019ರಲ್ಲಿಯೂ ಅಮಿತ್ ಶಾ ಅವರು ಗಾಂಧಿನಗರದಲ್ಲಿ 5.57 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗಲೂ ಅವರು ಇಷ್ಟೇ ಮತಗಳ ಅಂತರದಿಂದ ಗೆದ್ದಿದ್ದಾರೆ.
543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.