ಕೊಲೊಂಬೊ: ಸೈಬರ್ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ (ಸಿಐಡಿ) ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕೊಲೊಂಬೊ: ಸೈಬರ್ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ (ಸಿಐಡಿ) ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕೊಲೊಂಬೊ ಉಪನಗರಗಳಾದ ಮಡಿವೇಲಾ, ಬತ್ತರಮುಲ್ಲಾ ಹಾಗೂ ಪಶ್ಚಿಮ ಕರಾವಳಿ ಪಟ್ಟಣ ನೆಗೊಂಬೊದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿ ಹಣ ಸಂಪಾದಿಸಬಹುದು ಎಂದು ವಾಟ್ಸ್‌ಆಯಪ್ ಮೂಲಕ ಒಡ್ಡಿದ್ದ ಆಮಿಷಕ್ಕೆ ತುತ್ತಾಗಿ ವಂಚನೆಗೆ ಒಳಗಾದ ಸಂತ್ರಸ್ತರೊಬ್ಬರು ನೀಡಿದ್ದ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಅದರ ಭಾಗವಾಗಿಯೇ ಈ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಬಂಧಿತರು ದುಬೈ ಹಾಗೂ ಅಫ್ಗಾನಿಸ್ತಾನ ಸಂಪರ್ಕ ಹೊಂದಿದ್ದಾರೆ. ಇವರೆಲ್ಲ ಹಣಕಾಸು ವಂಚನೆ, ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸ್ಥಳೀಯರು ಹಾಗೂ ವಿದೇಶಿ ಪ್ರಜೆಗಳು ಸಹ ಇವರ ಮೋಸದ ಜಾಲಕ್ಕೆ ಬಿದ್ದಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ನಿಹಾಲ್ ಮಾಹಿತಿ ನೀಡಿದ್ದಾರೆ.