ನಾರಾಯಣಪುರ: ಮೂರು ದಿನಗಳಿಂದ ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು 6 ಜನ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ: ಮೂರು ದಿನಗಳಿಂದ ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು 6 ಜನ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ನಕ್ಸಲರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಇವರು ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ ಹಾಗೂ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸಂಘಟನೆಗೆ ಸೇರಿದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್ತಾರ್ ಅರಣ್ಯ ಪ್ರದೇಶದ ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಗೋಬೆಲ್ ಮತ್ತು ತುಲ್ಥುಲಿ ಗ್ರಾಮಗಳ ಬಳಿ ಕಳೆದ ಮೂರು ದಿನಗಳಿಂದ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.
ಜಿಲ್ಲಾ ಮೀಸಲು ಪಡೆ ಪೊಲೀಸರು, ಐಟಿಪಿಪಿ, ಸಿಆರ್‌ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ನಕ್ಸಲ್ ಸಮವಸ್ತ್ರಗಳು, ರೈಫಲ್, ಗ್ರೇನೆಡ್, ಎಸ್‌ಎಲ್‌ಆರ್ ಮ್ಯಾಗ್‌ಜಿನ್, ಕುಕ್ಕರ್ ಬಾಂಬ್, ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಸುಂದರ್ ರಾಜನ್ ಮಾಹಿತಿ ನೀಡಿದ್ದಾರೆ.