ತೀನ್‌ಸುಖಿಯಾ: 11 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಸ್ಸಾಂನ ತೀನ್‌ಸುಕಿಯಾದ ಸ್ಥಳೀಯ ನ್ಯಾಯಾಲಯವು 6 ಮಂದಿ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ತೀನ್‌ಸುಖಿಯಾ: 11 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಸ್ಸಾಂನ ತೀನ್‌ಸುಕಿಯಾದ ಸ್ಥಳೀಯ ನ್ಯಾಯಾಲಯವು 6 ಮಂದಿ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಭಾರತೀಯ ದಂಡ ಸಂಹಿತೆ 302ರ ಅಡಿ 6 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀನ್‌ಸುಕಿಯಾದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ದೀಪಂಕರ್ ಬೋರಾ ಆದೇಶಿಸಿದ್ದಾರೆ.
2013ರ ಅಕ್ಟೋಬರ್ ತಿಂಗಳಿನಲ್ಲಿ ಅಂಬಿಕಾಪುರ್ ಮಾರುಕಟ್ಟೆಯಲ್ಲಿ ಅಜಿತ್ ಸೋನೊವಾಲ್ ಎಂಬ ವ್ಯಕ್ತಿ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದರು.
ಬಳಿಕ,ವ್ಯಕ್ತಿಯನ್ನು ದಿಬ್ರೂಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ತೀವ್ರ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಅಸುನೀಗಿದ್ದ. ಈ ಸಂಬಂಧ ಸೋನೊವಾಲ್ ತಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ಕುರಿತಂತೆ ಕೂಲಂಕಷ ತನಿಖೆ ಕೈಗೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಪ್ರತ್ಯಕ್ಷದರ್ಶಿಗಳ ಸಾಕ್ಷಿ, ಪುರಾವೆ, ಸರ್ಕಾರಿ ವಕೀಲ ಅಶೋಕ್ ಚೌಧರಿ ಅವರ ಸಮರ್ಥ ವಾದವನ್ನು ಪರಿಗಣಿಸಿರುವ ನ್ಯಾಯಾಲಯ, ಅಪರಾಧಗಳಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.