ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 720 ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 720 ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಶಿಲ್-ಕಲ್ಯಾಣ ರಸ್ತೆಯ ಪಿಸಾವಲಿ ಗೇಟ್ ಬಳಿ ಮತದಾರರ ಗುರುತಿನ ಚೀಟಿಗಳು ಬಿದ್ದಿರುವುದನ್ನು ದಾರಿಹೋಕರು ಗುರುವಾರ ನೋಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಚುನಾವಣಾಧಿಕಾರಿಗಳ ದೂರಿನ ಆಧಾರದ ಮೇಲೆ, ಡೊಂಬಿವಿಲಿ ಪ್ರದೇಶದ ಮಾನ್ಪಾಡಾ ಪೊಲೀಸರು ಶುಕ್ರವಾರ ಕಳ್ಳತನ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತದಾರರ ಗುರುತಿನ ಚೀಟಿಗಳನ್ನು ಎಲ್ಲಿಂದ ಕಳವು ಮಾಡಲಾಗಿದೆ ಮತ್ತು ಈ ಕೃತ್ಯದ ಹಿಂದೆ ಇರುವವರು ಯಾರು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.