HEALTH TIPS

ಜಿ7 ಶೃಂಗಸಭೆಗಾಗಿ ಭಾರತದಿಂದ ಇಟಲಿನತ್ತ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

            ವದೆಹಲಿ: ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯಲಿರುವ ಜೂನ್ 14  ಆರಂಭಗೊಳ್ಳುವ ಜಿ-7 ಔಟ್ರೀಚ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿನತ್ತ ಪ್ರಯಾಣ ಬೆಳೆಸಿದ್ದಾರೆ.

          ಜಿ-7 ಔಟ್ರೀಚ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಇಂದು (ಜೂ.13) ರಂದು ಇಟಲಿಗೆ ಪ್ರಯಾಣ ಬೆಳೆಸಿದರು. ಇದು ಈ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ಮೊದಲ ಅಂತಾರಾಷ್ಟ್ರೀಯ ಭೇಟಿ ಅಥವಾ ಪ್ರಯಾಣವಾಗಿದೆ.

           ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಜೂನ್ 14 ರಂದು ಜಿ7 ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ಈ ವರ್ಷ ಏಳು ಮುಂದುವರಿದ ಆರ್ಥಿಕತೆಗಳ ಗುಂಪಿನ ವಾರ್ಷಿಕ ಶೃಂಗಸಭೆಯು ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯಲಿದೆ.

ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು G7 ಶೃಂಗಸಭೆಯಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


          

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries