ಬಾರಿ: ಇಟಲಿಯಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಬಾರಿ: ಇಟಲಿಯಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಖಾಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾದ ನಡುವಿನ ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ಪ್ರಾಮುಖ್ಯತೆ ಪಡೆದಿದೆ.
ಉಭಯ ನಾಯಕರ ನಡುವೆ ಏನೆಲ್ಲ ಮಾತುಕತೆ ನಡೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ.
ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಖಾಲಿಸ್ತಾನಿ ಹೋರಾಟಗಾರ ಹರ್‌ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಟ್ಯೂಡೊ ಆರೋಪಿಸಿದ್ದರು. 'ಆರೋಪ ಅಸಂಬದ್ಧ' ಎಂದಿದ್ದ ಭಾರತ, ಕೆನಡಾದ ವಾದವನ್ನು ನಿರಾಕರಿಸಿತ್ತು. ಅದು ಭಾರತ ಮತ್ತು ಕೆನಡಾ ನಡುವೆ ಸಂಬಂಧ ಹಳಸಲು ಕಾರಣವಾಗಿತ್ತು.